ರಾಮಕುಂಜ: ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ “ಒಂದು ಭೂಮಿಗಾಗಿ ಯೋಗ, ಒಂದು ಆರೋಗ್ಯ” ಎಂಬ ಧ್ಯೇಯದೊಂದಿಗೆ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಸಂಸ್ಥೆಯ ಕಾರ್ಯದರ್ಶಿ ಕೆ ಸೇಸಪ್ಪ ರೈ ಇವರು ವಿದ್ಯಾರ್ಥಿಗಳಿಗೆ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯಕ್ಕಾಗಿ ಯೋಗದ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳೆಲ್ಲರೂ ವಿವಿಧ ಯೋಗಾಸನಗಳನ್ನು ಮಾಡುವುದರ ಮೂಲಕ ಯೋಗ ದಿನಾಚರಣೆಯಲ್ಲಿ ತೊಡಗಿಕೊಂಡರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್ ಟಿ, ನಿಲಯ ವ್ಯವಸ್ಥಾಪಕ ರಮೇಶ್ ರೈ, ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಗಾಯತ್ರಿ ಯು ಎನ್, ಶ್ರೀ ರಾಮಕುಂಜೇಶ್ವರ ವಿದ್ಯಾಲಯದ ಪ್ರಾಂಶುಪಾಲ ಪ್ರವೀದ್ ಪಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಲೋಹಿತಾ ಎ, ಶಿಕ್ಷಕ ಶಿಕ್ಷಕೇತರ ವೃಂದದವರು ಸಹಕರಿಸಿದರು.
