ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾ.ಪಂ.ನ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಸುಪ್ರೀತ್ ಪಾಡೆಂಕಿ (33.ವ) ಅಲ್ಪ ಕಾಲದ ಅಸೌಖ್ಯದಿಂದ ಜೂ.21ರಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ವೃತ್ತಿಯಲ್ಲಿ ಕೃಷಿಕರಾಗಿದ್ದ ಇವರು ತಂದೆ ನಿವೃತ್ತ ಅರಣ್ಯ ಇಲಾಖೆಯ ಸಿಬ್ಬಂದಿ ಈಶ್ವರ ನಾಯ್ಕ, ಸಹೋದರಿಯರಾದ ನೀತಾ, ನಿಕ್ಷೀತಾ ಅವರನ್ನು ಅಗಲಿದ್ದಾರೆ.