ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಪುತ್ತೂರು:ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು .

ಶಾಲಾ ಮುಖ್ಯೋಪಾಧ್ಯಾಯನಿ ಲೋರಾ ಪಾಯ್ಸ್ ಸ್ವಾಗತಿಸಿ, ದಿನದ ಮಹತ್ವವನ್ನು ತಿಳಿಸಿದರು. ಶಾಲಾ ಸಂಚಾಲಕ ಧರ್ಮಗುರು ಲಾರೆನ್ಸ್ ಮಸ್ಕರೇನಸ್ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಸುಸ್ಥಿತಿಯಾಗಿ ಇರಿಸುವಲ್ಲಿ ಯೋಗದ ಪ್ರಾಮುಖ್ಯತೆಯನ್ನು ತಿಳಿಸಿದರು.

ಶಾಲಾ ದೈಹಿಕ ಶಿಕ್ಷಕ ಸದಾಶಿವ ವಿವಿಧ ಆಸನಗಳನ್ನೊಳಗೊಂಡ ಸುಮಾರು 30 ನಿಮಿಷಗಳ ಪ್ರಾಯೋಗಿಕ ಯೋಗವನ್ನು ವಿದ್ಯಾರ್ಥಿಗಳಿಗೆ ಕಲಿಸಿಕೊಟ್ಟರು. ಶಾಲಾ ಶಿಕ್ಷಕರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here