





ರಾಮಕುಂಜ: 2024-25ನೇ ಸಾಲಿನ ಎಸ್ಎಸ್ಎಲ್ಸಿ ಸಾರ್ವತ್ರಿಕ ಪರೀಕ್ಷೆಯಲ್ಲಿ ಕಡಬ ತಾಲೂಕು ವ್ಯಾಪ್ತಿಯ ಶಾಲೆಗಳಲ್ಲಿ ಪ್ರಥಮ ಭಾಷೆ ಕನ್ನಡ ಮತ್ತು ದ್ವಿತೀಯ ಭಾಷೆ ಕನ್ನಡ ವಿಷಯಗಳಲ್ಲಿ ಪೂರ್ಣ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಮತ್ತು ಒಟ್ಟು 625 ಅಂಕಗಳಲ್ಲಿ 620 ಮತ್ತು ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ಸನ್ಮಾನ ಮಾಡಲಾಗುವುದು ಎಂದು ಕಡಬ ತಾಲೂಕು ಕಸಾಪದ ಅಧ್ಯಕ್ಷರಾದ ಸೇಸಪ್ಪ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಂತಹ ವಿದ್ಯಾರ್ಥಿಗಳ ಮಾಹಿತಿಯನ್ನು ಸಂಬಂಧಪಟ್ಟ ಮುಖ್ಯ ಗುರುಗಳು ಜು.5ರ ಒಳಗೆ ವಾಟ್ಸಪ್ ನಂ.9741844304ಗೆ ಕಳಿಸಿಕೊಡುವಂತೆ ಹಾಗೂ ನಂತರ ಬಂದ ಹೆಸರುಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.








