ನೆರೆವೇರಿದ ಪ್ರಾರ್ಥನೆ – ರಾಜಸ್ಥಾನ ಹೈಕೋರ್ಟ್ ನ್ಯಾಯಾಧೀಶರಾದ ಮುಖೇಶ್ ರಾಜ್ ಪುರೋಹಿತ್ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಾಧೀಶ ಮುಕೇಶ್ ರಾಜ್ ಪುರೋಹಿತ್ ಅವರು ಜೂ.27 ರಂದು ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು.


ಸುಪ್ರೀಂ ಕೋರ್ಟ್‌ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದ ಅವರು ಮೂರು ತಿಂಗಳ ಹಿಂದೆಯಷ್ಟೆ ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಸಂದರ್ಭ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಪ್ರಾರ್ಥನಾ ಸಂಕಲ್ಪ ನೆರವೇರಿಸಿದರು. ಇದೀಗ ರಾಜಸ್ಥಾನದ ಹೈಕೋರ್ಟ್ ನ್ಯಾಯಾಧೀಶರಾದ ಬಳಿಕ ಸೌತಡ್ಕ ಮಹಾಗಪತಿ ಕ್ಷೇತ್ರಕ್ಕೆ ಆಗಮಿಸಿ ಬಳಿಕ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಗಮಿಸಿ ದಂಪತಿ ಸಮೇತರಾಗಿ ಪ್ರಾರ್ಥಿಸಿದರು.

ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ನ್ಯಾಯಾಧೀಶರಿಗೆ ದೇವಳ ಪರವಾಗಿ ಗೌರವಾರ್ಥವಾಗಿ ಶಲ್ಯ ತೊಡಿಸಿದರು. ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಪ್ರಾರ್ಥನೆ ನೆರವೇರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ವಿನಯ ಸುವರ್ಣ, ನ್ಯಾಯವಾದಿ ಮಹೇಶ್ ಕಜೆ, ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here