ಅರಿಯಡ್ಕ ಮುಂಡಕೊಚ್ಚಿ ಪ್ರಭಾಕರ ಪ್ರಭು ನಿಧನ

0

ಕಾವು: ಅರಿಯಡ್ಕ ಗ್ರಾಮದ ಮುಂಡಕೊಚ್ಚಿ ನಿವಾಸಿ ಪ್ರಭಾಕರ ಪ್ರಭು(ವ.63)ರವರು ಅಲ್ಪಕಾಲದ ಅಸೌಖ್ಯದಿಂದ ಜೂ.29ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ನಳಿನಿ, ಪುತ್ರರಾದ ಗೌತಮ್, ಗಗನ್ ಮತ್ತು ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

ಮೃತರ ಮನೆಗೆ ಮಾಜಿ ಶಾಸಕ ಸಂಜೀವ ಮಠಂದೂರು, ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಅರಿಯಡ್ಕ ಗ್ರಾ.ಪಂ ಮಾಜಿ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯ ಸೇರಿದಂತೆ ಗ್ರಾ.ಪಂ ಸದಸ್ಯರು ಹಾಗೂ ಅನೇಕ ಬಂಧು ಮಿತ್ರರು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here