ಪುತ್ತೂರು: ಮಂಗಿಲಪದವು ನಿವಾಸಿ, ಕಾಂಗ್ರೆಸ್ ಮುಖಂಡ ರಘು ಪೂಜಾರಿ (60ವ) ಹೃದಯಾಘಾತದಿಂದಾಗಿ ನಿಧನರಾದರು.
ರಘು ಪೂಜಾರಿ ಹಲವಾರು ವರ್ಷಗಳ ಕಾಲ ವೀರಕಂಬ ಗ್ರಾಮ ಪಂಚಾಯತ್ ಸದಸ್ಯರಾಗಿ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಒಕ್ಕೆತ್ತೂರು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ, ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಮೃತರು ಪತ್ನಿ, ಮೂವರು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.