ನೆಲ್ಯಾಡಿ: ಜೆಸಿಐ ನೆಲ್ಯಾಡಿ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇಲ್ಲಿ ಏರ್ಪಡಿಸಲಾಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಳೆದ 19 ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇಲ್ಲಿಯ ಹಿರಿಯ ವೈದ್ಯಾಧಿಕಾರಿ ಡಾ. ವೇದಾವತಿ ಎಂ., ಆರೋಗ್ಯ ಇಲಾಖೆಯಲ್ಲಿ ಕಳೆದ 17 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರ ವಾಮದಪದವು ಇಲ್ಲಿಯ ಮಕ್ಕಳ ತಜ್ಞರಾದ ಡಾ. ಜೀವನ್ ಲಾಸ್ರದೋ ಹಾಗೂ ಆರೋಗ್ಯ ಇಲಾಖೆಯಲ್ಲಿ ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಪೆರುವಾಯಿ ಇಲ್ಲಿಯ ಹಿರಿಯ ವೈದ್ಯಾಧಿಕಾರಿ ಡಾ. ಕೃಷ್ಣಮೂರ್ತಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ನೆಲ್ಯಾಡಿ ಜೆಸಿಐ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ, ಮಂಗಳೂರು ಎ.ಜೆ. ಆಸ್ಪತ್ರೆಯ ವೈದ್ಯರುಗಳಾದ ಡಾ.ಸುಚಿತ ಎಸ್.ಶೆಟ್ಟಿ, ಡಾ.ನಿಬೀನ ನಿಶಾ, ಡಾ. ವಿದ್ಯಾಕೃಷ್ಣ, ಡಾ. ಶಫೀಕ್, ಡಾ.ಸ್ಪೂರ್ತಿ ಕೆ ಶೆಟ್ಟಿ, ಡಾ. ಶ್ರೇಷ್ಠ ಆಳ್ವ, ಡಾ. ನಿರಂಜನ್ ಹಾಗೂ ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇಲ್ಲಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.