ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ.100 ಫಲಿತಾಂಶ

0

ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

ನಿಡ್ಪಳ್ಳಿ: ಬೆಟ್ಟಂಪಾಡಿ  ಸರಕಾರಿ ಪ್ರೌಢಶಾಲೆಗೆ ಕಳೆದ ಎಸ್. ಎಸ್ .ಎಲ್ .ಸಿ ಪರೀಕ್ಷೆಯಲ್ಲಿ ಎ ಗ್ರೇಡ್ ನೊಂದಿಗೆ ಶೇ.100 ಫಲಿತಾಂಶ ಬರಲು ಕಾರಣಕರ್ತರಾದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. 

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ  ಸಮಿತಿ , ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಿಕ್ಷಕರ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ನಿಡ್ಪಳ್ಳಿ ಗ್ರಾಮ ಪಂಚಾಯತ್  ಅಧ್ಯಕ್ಷ  ವೆಂಕಟರಮಣ ಬೋರ್ಕರ್ ಸಭೆಯ ಅಧ್ಯಕ್ಷತೆ ವಹಿಸಿ ಶಾಲೆಯು ಸತತ ಮೂರು ವರ್ಷದಿಂದ ಶೇ.100 ಫಲಿತಾಂಶ ಬರುತ್ತಿರುವುದನ್ನು ಶ್ಲಾಘಿಸಿದರು. ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ಮಾದವ ಪೂಜಾರಿ ಫಲಿತಾಂಶಕ್ಕೆ ಕಾರಣರಾದ ಎಲ್ಲರನ್ನು ಅಭಿನಂದಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಅಬ್ದುಲ್ ರಜಾಕ್ ಶಾಲಾ ಉತ್ತಮ ಫಲಿತಾಂಶಕ್ಕೆ ಅಭಿನಂದನೆಯನ್ನು ವ್ಯಕ್ತಪಡಿಸಿ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು. ಮುಖ್ಯ ಅತಿಥಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕ ಹಾಗೂ ಎಸ್.ಎಸ್.ಎಲ್.ಸಿ ನೋಡಲ್ ಅಧಿಕಾರಿ ಹರಿಪ್ರಸಾದ್ ಶಾಲಾ ಫಲಿತಾಂಶಕ್ಕೆ ಮೆಚ್ಚುಗೆ ಯನ್ನು ವ್ಯಕ್ತಪಡಿಸಿ ಇಲಾಖಾ ಪರವಾಗಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕ  ಹರಿಪ್ರಸಾದ್ ರವರನ್ನು ಶಾಲಾ ಪರವಾಗಿ ಗೌರವಿಸಲಾಯಿತು. ಉತ್ತಮ ಫಲಿತಾಂಶಕ್ಕೆ ಕಾರಣರಾದ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಸಭೆಯಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪೋಷಕರು, ಎಸ್.ಡಿ.ಎಮ್.ಸಿ ಸದಸ್ಯರು ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಕಲಾ ರವರು ಎಲ್ಲರನ್ನು ಸ್ವಾಗತಿಸಿದರು. ಗಣಿತ ಶಿಕ್ಷಕಿ ಮಂಜುಳಾ ಭಟ್ ವಂದಿಸಿದರು. ಮುಖ್ಯ ಗುರು ವಿಜಯ ಕುಮಾರ್.ಎಂ ವಿದ್ಯಾರ್ಥಿಗಳ ಸಾಧನೆಗೆ ಹಾಗೂ ಶಿಕ್ಷಕರ ಸಹಕಾರಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಗೌರವ ಶಿಕ್ಷಕಿ ನಳಿನಿ  ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಸಿಂಧು ವಿ ಕೆ, ಉಮಾ.ಪಿ.ಆರ್, ವಿನುತಾ ಸಿ. ಕೆ ಸಹಕರಿಸಿದರು.

LEAVE A REPLY

Please enter your comment!
Please enter your name here