ಪುತ್ತೂರು: ಜು.3ರಂದು ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ಷಕ- ಶಿಕ್ಷಕ ಸಂಘದ ಮಹಾ ಸಭೆ ನಡೆಯಿತು.
ಮುಖ್ಯ ಅತಿಥಿ ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ ಹೆಚ್.ಮಾಧವ ಭಟ್ ಮಾತಾನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಜೊತೆಗಿನ ಹೆತ್ತವರ ಜವಾಬ್ದಾರಿಯನ್ನು ಮನವರಿಕೆ ಮಾಡಿದರು.
ಶಾಲಾ ಮುಖ್ಯೋಪಾಧ್ಯಾಯನಿ ವಂದನೀಯ ಧರ್ಮ ಭಗಿನಿ ಲೋರ ಪಾಯ್ಸ್ ಅವರು ಸಂಸ್ಥೆಗೆ ಸಂಬಂಧಿಸಿದ ಅಗತ್ಯ ಮಾಹಿತಿಗಳನ್ನು ಪೋಷಕರ ತಿಳಿಸಿದರು.

ಸಭಾಧ್ಯಕ್ಷರಾಗಿ ಮಾಯಿದೆ ದೇವುಸ್ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ, ಅತೀ ವಂದನೀಯ ಧರ್ಮ ಗುರು ಲಾರೆನ್ಸ್ ಮಸ್ಕರೇನಸ್, ಜೊತೆ ಕಾರ್ಯದರ್ಶಿ ಸರಿತಾ ಪ್ರಮೋದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
2025- 26ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ಉಪಾಧ್ಯಕ್ಷರಾಗಿ ಮುಕೇಶ್ ಹಾಗೂ ಸಹ ಕಾರ್ಯದರ್ಶಿಯಾಗಿ ಪ್ರಮೀಳಾ ರೈ ಅವರು ಆಯ್ಕೆಗೊಂಡರು. ಶಿಕ್ಷಕಿ ವಿದ್ಯಾಶ್ರೀ ನೇತೃತ್ವದಲ್ಲಿ ನಡೆಯಿತು.2024- 25 ನೇ ಶೈಕ್ಷಣಿಕ ಸಾಲಿನ ರಕ್ಷಕ -ಶಿಕ್ಷಕ ಸಂಘದ ಉಪಾಧ್ಯಕ್ಷ ವಿವೇಕ್ ಆಳ್ವ ತನ್ನ ಅವಧಿಯಲ್ಲಿ ಸಹಕಾರ ನೀಡಿದವರಿಗೆ ವಂದಿಸಿದರು.
ಕಾರ್ಯಕ್ರಮದ ಶಿಕ್ಷಕಿ ಸರಿತಾ ಸ್ವಾಗತಿಸಿದರು. ಶಿಕ್ಷಕಿ ಸುನಿತಾ ವಾರ್ಷಿಕ ವರದಿಯನ್ನು ವಾಚಿಸಿ, ಶಿಕ್ಷಕಿ ಜಾಸ್ಮಿನ್ ರವರು ಲೆಕ್ಕಪತ್ರ ಮಂಡಿಸಿದರು.ಶಿಕ್ಷಕಿ ಲವೀನ ವಂದಿಸಿದರು.
ಶಿಕ್ಷಕಿ ದೀಪ್ತಿ ಕಾಯಕ್ರಮ ನಿರೂಪಿಸಿದರು.