ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪಿಯು ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಕಾರ್ಯಕ್ರಮವಾದ ‘ಇಂದ್ರಕಲಾ ವೈಭವ’ ಶನಿವಾರದಂದು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ವಿವೇಕಾನಂದ ಮಹಾ ವಿದ್ಯಾಲಯದ ವಿಶ್ರಾಂತ ಪ್ರಾಂಶುಪಾಲರಾದ ವಿ.ಜಿ. ಭಟ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕಲಿಕಾ ಜೀವನದಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾ ಸಮತೋಲನದ ಬದುಕನ್ನು ನಡೆಸಬೇಕು. ಈ ಮೂಲಕ ಸಂತಸದ ಜೀವನವನ್ನು ರೂಪಿಸಿಕೊಳ್ಳಬಹುದಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಇಂದ್ರಪ್ರಸ್ಥ ಪಿ ಯು ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಯು. ರಾಜೇಶ್ ಪೈ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸುವಲ್ಲಿ ಈ ಕಾಲೇಜಿನಲ್ಲಿ ಹಲಾವಾರು ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. ವಿದ್ಯಾರ್ಥಿಗಳು ಅದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾಲೇಜು ಪ್ರಾಂಶುಪಾಲ ಎಚ್.ಕೆ. ಪ್ರಕಾಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಡಳಿತ ಮಂಡಳಿಯ ಸದಸ್ಯರಾದ ಸುಧಾಕರ ಶೆಟ್ಟಿ, ವಿದ್ಯಾಧರ ಜೈನ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ಪ್ರತಿಭಾ ಕಲಾ ಪ್ರದರ್ಶನ ಆಕರ್ಷಕವಾಗಿ ಮೂಡಿ ಬಂದಿತ್ತು. ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಡಾ. ರಜತಾ ಸಾಧಕ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಉಪನ್ಯಾಸಕಿ ಚೈತ್ರಾ ಸ್ವಾಗತಿಸಿದರು. ಉಪನ್ಯಾಸಕಿ ಯಶಸ್ವಿ ಸಿ.ಎಂ. ವಂದಿಸಿದರು. ಉಪನ್ಯಾಸಕಿ ಸ್ವಾತಿ ಬಿ.ಎಸ್. ಕಾರ್ಯಕ್ರಮ ನಿರೂಪಿಸಿದರು.