ಪುತ್ತೂರು: ಸಂಪ್ಯ ಶ್ರೀರಾಮ ನಗರದ ನವಚೇತನಾ ಯುವಕ ಮಂಡಲದ ವತಿಯಿಂದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಅ.27ರಿಂದ ಎರಡು ದಿನಗಳ ಕಾಲ ನಡೆಯಲಿರುವ 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯು ಜು.6ರಂದು ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಿಡುಗಡೆಗೊಂಡಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ನವಚೇತನ ಯುವಕ ಮಂಡಲದ ಗೌರವಾಧ್ಯಕ್ಷರಾಗಿರುವ ಡಾ.ಸುರೇಶ್ ಪುತ್ತೂರಾಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಲಕ್ಷ್ಮಣ್ ಬೈಲಾಡಿ, ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಉದಯ ಕುಮಾರ್ ರೈ ಎಸ್ ಸಂಪ್ಯ, ಜತೆ ಕಾರ್ಯದರ್ಶಿ ಉಮೇಶ್ ಎಸ್.ಕೆ., ಐಕ್ಯಕಲಾ ಸೇವಾ ಟ್ರಸ್ಟ್‌ನ ಚೇತನ್, ವೈದ್ಯರಾದ ಡಾ.ವೇಣುಗೋಪಾಲ, ಡಾ.ಚಿಂತನ್, ದಾನಿ ಉದಯ ಕುಮಾರ್ ಪುಣಚ, ಯುವಕ ಮಂಡಲದ ಅಧ್ಯಕ್ಷ ಜಯಂತ ಶೆಟ್ಟಿ ಕಂಬಳತ್ತಡ್ಡ, ಕಾರ್ಯದರ್ಶಿ ಪ್ರವೀಣ್ ಉದಯಗಿರಿ, ಕೋಶಾಧಿಕಾರಿ ತೇಜಸ್, ಭೀಮಯ್ಯ ಭಟ್, ಹರಿಣಿ ಪುತ್ತೂರಾಯ, ಉಮೇಶ್ ಸಂಪ್ಯ, ರವಿನಾಥ ಗೌಡ ಬೈಲಾಡಿ, ಸುರೇಶ್ ಪೂಜಾರಿ ಸಂಪ್ಯದಮೂಲೆ, ಮಂಜಪ್ಪ ಗೌಡ ಬೈಲಾಡಿ ಸೇರಿದಂತೆ ಯುವಕ ಮಂಡಲದ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.