ರಾಮಕುಂಜ ಪ.ಪೂ. ಕಾಲೇಜು ಎನ್‌ಎಸ್‌ಎಸ್ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಕೊಯಿಲ ಎಂಡೋ ಪಾಲನಾ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಪರಿಸರದಲ್ಲಿ ನಡೆಯಿತು.


ಒಂದು ದಿನದ ಸ್ವಚ್ಛತಾ ಶಿಬಿರದಲ್ಲಿ 30 ಎನ್.ಎಸ್.ಎಸ್ ಸ್ವಯಂಸೇವಕರು ಭಾಗವಹಿಸಿದ್ದರು. ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಎಂಡೋಪಾಲನಾ ಕೇಂದ್ರದ ಆವರಣದಲ್ಲಿ ವಿವಿಧ ಸ್ವಚ್ಛತಾ ಕಾರ್ಯ ಮಾಡಲಾಯಿತು. ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಕೆ., ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಿಶಿರ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳ ಸೇವಾ ಕಾರ್ಯಕ್ರಮ ನಡೆಯಿತು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಕೀರ್ತನ್‌ರವರು ಸ್ವಯಂಸೇವಕರಿಗೆ ಸೂಚನೆಗಳನ್ನು ನೀಡಿದರು. ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಮರಿಯಮ್ಮ, ಶ್ರುಶೂಕ್ಷಣಾಧಿಕಾರಿ ರಹಮತ್, ಕಾಲೇಜಿನ ಉಪನ್ಯಾಸಕ ಶಿವಪ್ರಸಾದ್ ಹೊಳ್ಳ ಸಹಕರಿಸಿದರು.

LEAVE A REPLY

Please enter your comment!
Please enter your name here