ಪುತ್ತೂರು: ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಮತ್ತು ಶ್ರೀ ವಿಷ್ಣುಮೂರ್ತಿ ದೇವಾಲಯ ಗೋಪಾಲಕ್ಷೇತ್ರ ಇರ್ದೆ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ದೂಮಡ್ಕ, ಪೇರಲ್ತಡ್ಕ, ಗುಮ್ಮಟಗದ್ದೆ(ಉಪ್ಪಳಿಗೆ), ಅಜ್ಜಿಕಲ್ಲು, ಅಜಲಡ್ಕ ಇವುಗಳ ಸಹಕಾರದೊಂದಿಗೆ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ.ಹೆಗ್ಗಡೆಯವರ ಆಶೀರ್ವಾದದೊಂದಿಗೆ 17ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ಹಾಗೂ ಧಾರ್ಮಿಕ ಪ್ರವಚನ ಕಾರ್ಯಕ್ರಮ ಆ.8 ರಂದು ಬೆಳಿಗ್ಗೆ ಇರ್ದೆ ಗೋಪಾಲಕ್ಷೇತ್ರ ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು.7 ರಂದು ಶ್ರೀ ಕ್ಷೇತ್ರದಲ್ಲಿ ನಡೆಯಿತು.
ದೇವಳದ ಅರ್ಚಕ ಅನಂತರಾಮ ಮಡುಕುಲ್ಲಾಯರವರು ಪೂಜಾ ವಿಧಿ ವಿಧಾನಗಳೊಂದಿಗೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪನ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರುಗಳು, ಪದಾಧಿಕಾರಿಗಳು, ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಗೌರವಾಧ್ಯಕ್ಷರು, ಗೌರವ ಸಲಹೆಗಾರರು, ಅಧ್ಯಕ್ಷರು, ಕಾರ್ಯದರ್ಶಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.