ನೆಲ್ಯಾಡಿ: ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಹಿಂದಿನಿಂದ ಬಂದ ಪಿಕಪ್ ವಾಹನವೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಪಂಜಳ ಎಂಬಲ್ಲಿ ಜು.5ರಂದು ಮಧ್ಯಾಹ್ನ ನಡೆದಿದೆ.
ವಿಟ್ಲ ಕಸಬಾ ಗ್ರಾಮದ ಚಂದಳಿಕೆ ನಿವಾಸಿ ಶ್ರೀಧರ ಗೌಡ(47ವ.)ಗಾಯಗೊಂಡವರಾಗಿದ್ದಾರೆ. ಶ್ರೀಧರ ಅವರು ಪಂಜಳದಲ್ಲಿ ತನ್ನ ಬೈಕ್(ಕೆಎ 21, ಇಡಿ 3549) ರಸ್ತೆ ಎಡಬದಿಯಲ್ಲಿ ನಿಲ್ಲಿಸಿ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಹಿಂದಿನಿಂದ ಅಶೋಕ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಪಿಕಪ್(ಕೆಎ 19, ಎಎ 1138) ಡಿಕ್ಕಿಯಾಗಿದೆ.
ಘಟನೆಯಲ್ಲಿ ಶ್ರೀಧರ ಅವರು ಬೈಕ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಚಿಕಿತ್ಸೆಗೆ ಪುತ್ತೂರು ಪ್ರಗತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಶ್ರೀಧರ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.