ಪುತ್ತೂರು: ಯುವತಿಗೆ ಕಿರುಕುಳ ನೀಡಿದ ಘಟನೆ ನೆಹರುನಗರದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ.
ನೆಹರುನಗರದಲ್ಲಿ ಮಿತ್ತೂರು ಮೂಲದ ಮಹಿಳೆ ಮತ್ತು ಆಕೆಯ ಪುತ್ರಿ ಬಸ್ಗಾಗಿ ಕಾಯುತ್ತಿದ್ದ ವೇಳೆ ವ್ಯಕ್ತಿಯೋರ್ವ ಅಲ್ಲಿಗೆ ಬಂದು ಮಹಿಳೆಯ ಪುತ್ರಿಗೆ ಕಿರುಕುಳ ನೀಡಿರುವ ಆರೋಪ ವ್ಯಕ್ತವಾಗಿತ್ತು. ಘಟನೆ ಕುರಿತು ಪೊಲೀಸರು ಅರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.