ಪುತ್ತೂರು : ದರ್ಬೆ ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.9 ರಂದು ವಾಹನ ಚಾಲಕರ ಸಮಾಲೋಚನ ಸಭೆಯು ನಡೆಯಿತು.
ಸಂಪನ್ಮೂಲ ವ್ಯಕ್ತಿ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ದಿನೇಶ್ ಕುಮಾರ್ ಭಾಗವಹಿಸಿ ವಾಹನ ಚಾಲನೆ ಮಾಡುವಾಗ ಅನುಸರಿಸಬೇಕಾದ ನಿಯಮಗಳ ಕುರಿತು ಮಾಹಿತಿ ನೀಡಿದರು. ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ.ಎಸ್ ಮಾತನಾಡಿ, ಮಕ್ಕಳನ್ನು ಅತೀ ಜಾಗರೂಕತೆಯಿಂದ ಮನೆಗೆ ತಲುಪಿಸುವುದರಲ್ಲಿ ಚಾಲಕರ ಪಾತ್ರ ಮಹತ್ವವಾದದ್ದು ಎಂದು ಹೇಳಿದರು.

ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ರಘುನಾಥ ರೈ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಾಂಶುಪಾಲ ಭಗಿನಿ ಅನಿತಾರವರು ಸಮಯ ಪಾಲನೆಯ ಬಗ್ಗೆ ಅರಿವು ಮೂಡಿಸಿದರು.
ಮಕ್ಕಳ ಸುರಕ್ಷ ಸಮಿತಿಯ ಪದಾಧಿಕಾರಿ ಪ್ರತೀಕ್ಷಾ ಪೈ ಹಾಗೂ ರಕ್ಷಕ – ಶಿಕ್ಷಕ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶಿಕ್ಷಕರಾದ ಶರಲ್ ಶ್ವೇತಾ ಸ್ವಾಗತಿಸಿ, ಅಕ್ಷತಾ ವಂದಿಸಿದರು. ಕಾರ್ಯಕ್ರಮವನ್ನು ನಿರೂಪಿಸಿದರು.