ಪುತ್ತೂರು: ಮೆಸ್ಕಾಂ ಪುತ್ತೂರು ಗ್ರಾಮಾಂತರ ಹಾಗೂ ನಗರ ಉಪವಿಭಾಗಗಳ ಜನಸಂಪರ್ಕ ಸಭೆಯು ಜು.15ರಂದು ಬೆಳಿಗ್ಗೆ 11ರಿಂದ ಮಂಗಳೂರು ಅಧೀಕ್ಷಕ ಇಂಜಿನಿಯರ್ ಇವರ ಅಧ್ಯಕ್ಷತೆಯಲ್ಲಿ ಕುಂಬ್ರದಲ್ಲಿರುವ ಮೆಸ್ಕಾಂ ಗ್ರಾಮಾಂತರ ಉಪವಿಭಾಗ ಕಚೇರಿಯಲ್ಲಿ ನಡೆಯಲಿದೆ.
ಬಳಕೆದಾರರು ತಮ್ಮ ಅಹವಾಲುಗಳಿದ್ದಲ್ಲಿ ಭಾಗವಹಿಸಿ, ಸೂಕ್ತ ರೀತಿಯಲ್ಲಿ ಪರಿಹರಿಸಿಕೊಳ್ಳುವಂತೆ ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
