ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನವೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದ ಘಟನೆ ಜು.14ರಂದು 34 ನೆಕ್ಕಿಲಾಡಿ ಗ್ರಾಮದ ಆದರ್ಶನಗರದಲ್ಲಿ ನಡೆದಿದೆ. ಘಟನೆಯಿಂದ ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಬೊಳುವಾರು ಕಡೆಯಿಂದ 34 ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಪಿಕಪ್ ವಾಹನವೊಂದು ಆದರ್ಶನಗರ ತಲುಪುವಾಗ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ಏಕಾಏಕಿ ರಸ್ತೆ ಬದಿಯ ಕಂದಕಕ್ಕೆ ಮಗುಚಿ ಬಿದ್ದಿದೆ. ಅಪಘಾತದಿಂದ ಪಿಕಪ್ ವಾಹನ ಜಖಂಗೊಂಡಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.