ಪುತ್ತೂರು: ಪುತ್ತೂರಿನ ನಗರಸಭಾ ವ್ಯಾಪ್ತಿಯ ದರ್ಬೆ ಮತ್ತು ಕಲ್ಲಾರೆಯಲ್ಲಿ ಮಳೆಗೆ ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿದ್ದು, ಅದನ್ನು ಮುಚ್ಚುವ ಕಾಮಗಾರಿ ಆರಂಭವಾಗಿದೆ.

ಭಾನುವಾರ ಹೊಂಡಗಳನ್ನು ವೀಕ್ಷಣೆ ಮಾಡಿದ ಶಾಸಕ ಅಶೋಕ್ ರೈ ಅವರು ಮಳೆ ಕಡಿಮೆಯಾದ ತಕ್ಷಣ ಹೊಂಡವನ್ನು ಮುಚ್ಷುವಂತೆ ನಗರಸಭೆ ಅಧಿಕಾರಿಗೆ ಸೂಚನೆ ನೀಡಿದ್ದರು. ಶಾಸಕರ ಸೂಚನೆಯಂತೆ ಮಂಗಳವಾರ ಬೆಳಿಗ್ಗೆ ಕಾಮಗಾರಿ ಪ್ರಾರಂಭವಾಗಿದೆ. ಇಂದು ಸಂಜೆಯೊಳಗೆ ರಸ್ತೆ ಹೊಂಡ ಮುಚ್ಚುವ ಕಾಮಗಾರಿ ಪೂರ್ಣಗೊಳ್ಳಲಿದೆ.