ರಾಮಕುಂಜ: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ವತಿಯಿಂದ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆಯನ್ನು ರಾಮಕುಂಜ ಶ್ರೀ ರಾಮಕುಂಜೇಶ್ವರ ವಸತಿ ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಕ.ಸಾ.ಪ. ಕಡಬ ತಾಲೂಕು ಘಟಕದ ಅಧ್ಯಕ್ಷರಾದ ಕೆ.ಸೇಸಪ್ಪ ರೈ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ಹಾದಿಯ ಕುರಿತು ತಿಳಿಸಿದರು. ನಿಕಟ ಪೂರ್ವ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು ಮಾತನಾಡಿ, ಕನ್ನಡ ಭಾಷಾ ಬೆಳವಣಿಗೆಯಲ್ಲಿ ಸಾಹಿತ್ಯ ಪರಿಷತ್ತಿನ ಪಾತ್ರ ಬಹುಮುಖ್ಯವಾಗಿದೆ ಎಂದರು. ಹೋಬಳಿ ಅಧ್ಯಕ್ಷ ಪದ್ಮಪ್ಪ ಗೌಡ, ಗೌರವ ಕಾರ್ಯದರ್ಶಿಗಳಾದ ಎನ್.ಕೆ.ನಾಗರಾಜ್, ವಸಂತ್ ಕುಮಾರ್ ಡಿ., ಸದಸ್ಯರಾದ ರಮೇಶ್ ಕೋಟೆ, ವೆಂಕಟರಮಣ ಭಟ್, ಯಶವಂತ ರೈ, ಎ.ಎನ್.ಕೊಳಂಬೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕ.ಸಾ. ಪ.ಕಡಬ ಘಟಕದ ಕೋಶಾಧಿಕಾರಿ ಬಾಲಚಂದ್ರ ಮುಚ್ಚಿಂತಾಯ ಸ್ವಾಗತಿಸಿದರು. ಸದಸ್ಯೆ ಪ್ರೇಮಾ ವಂದಿಸಿದರು. ಸಂಘಟನಾ ಕಾರ್ಯದರ್ಶಿ ಕಿಶೋರ್ ಕುಮಾರ್ ಬಿ ಕಾರ್ಯಕ್ರಮ ನಿರೂಪಿಸಿದರು. ತಾಲೂಕಿನ ವಿವಿಧ ಶಾಲೆಯ ವಿದ್ಯಾರ್ಥಿಗಳು, ಪೋಷಕರು, ಸಾಹಿತ್ಯ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.