ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ (ರಿ.) ಸಂಪ್ಯ ಇದರ ಸಮೂಹ ಸಂಸ್ಥೆಯಲ್ಲೊಂದಾದ ಅಕ್ಷಯ ಕಾಲೇಜು ಪುತ್ತೂರು ಇದರ 2025-26ನೇ ಶೈಕ್ಷಣಿಕ ವರ್ಷಕ್ಕೆ ಹೊಸತಾಗಿ ದಾಖಲಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ವಿದ್ಯಾರ್ಥಿಗಳಿಗೆ ಪ್ರಸಕ್ತ ಕಾಲಮಾನದ ಶಿಕ್ಷಣದ ಸವಾಲುಗಳ ಅರಿವು ಮೂಡಿಸುವ ಸಲುವಾಗಿ, ಕಾಲೇಜಿನ ಶಿಕ್ಷಕ-ರಕ್ಷಕ ಸಂಘ ಮತ್ತು ಆಂತರಿಕ ಗುಣಮಟ್ಟ ಭರವಸೆಯ ಕೋಶದ ಆಯೋಜನೆಯಲ್ಲಿ ಒಂದು ದಿನದ ತರಬೇತಿ ಕಾರ್ಯಗಾರ “ದೃಷ್ಟಿ-2025” ಜು.17ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.



ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಜಯಂತ್ ನಡುಬೈಲು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಕಾಲೇಜಿನಲ್ಲಿ ಇಂತಹ ಕಾರ್ಯಕ್ರಮಗಳ ಆಯೋಜನೆಯ ಉದ್ದೇಶವನ್ನು ತಿಳಿಯಪಡಿಸಿ ಶುಭಹಾರೈಸಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಡಾ. ರವಿ ಕುಮಾರ್ ಎಲ್ ಪಿ. ಖ್ಯಾತ ಶಿಕ್ಷಣ ತಜ್ಞರು ಮತ್ತು ವಿಶ್ವಸಂಸ್ಥೆಯ ಭಾರತೀಯ ಪ್ರಾದೇಶಿಕ ಕಾರ್ಯದರ್ಶಿಯವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪ್ರಸಕ್ತ ಕಾಲದ ಅಂತಾರಾಷ್ಟ್ರೀಯ ಮಟ್ಟದಲ್ಲಿನ ಶೈಕ್ಷಣಿಕ ಕ್ಷೇತ್ರದ ಸವಾಲುಗಳ ಜೊತೆಗೆ ವಿದ್ಯಾರ್ಥಿಗಳಿಗೆ ಬೇಕಾದ ಜೀವನ ಮೌಲ್ಯಗಳು ಹಾಗೂ ಪೋಷಕರ ಜವಾಬ್ದಾರಿಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾಲೇಜಿನ ನೀತಿ ನಿಯಮಗಳ ಬಗ್ಗೆ ಕಾಲೇಜಿನ ಆಡಳಿತ ಅಧಿಕಾರಿ ಅರ್ಪಿತ್ ಟಿ. ಎ. ಮತ್ತು ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ. ಪಕ್ಕಳ ವಿವರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ್ ಉಪಸ್ಥಿತರಿದ್ದರು.
ಅಕ್ಷಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಗಂಗಾರತ್ನ ಸ್ವಾಗತಿಸಿ, ಉಪಪ್ರಾಂಶುಪಾಲ ರಕ್ಷಣ ಟಿ. ಆರ್. ವಂದಿಸಿದರು. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸುಪುಭಾ ಕೆ. ಕಾರ್ಯಕ್ರಮವನ್ನು ನಿರ್ವಹಿಸಿದರು.