ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಬೆಂಗಳೂರು ಇವರ ವತಿಯಿಂದ ಮಂಗಳೂರಿನ ಪ್ರೆಸ್ಟೀಜ್ ಕಾಲೇಜಿನಲ್ಲಿ ನಡದ ಅಭಿನಂದನಾ ಸಮಾರಂಭದಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಉತ್ತಮ ಸಾಧನೆ ಮಾಡಿದ ಉಪ್ಪಿನಂಗಡಿಯ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿಗೆ ಅಭಿನಂದನಾ ಫಲಕ ನೀಡಿ ಗೌರವಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇ ಗೌಡ ಅವರು ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಚ್.ಕೆ. ಪ್ರಕಾಶ್ ಅವರಿಗೆ ಅಭಿನಂದನಾ ಫಲಕ ನೀಡಿ ಗೌರವಿಸಿದರು.