ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಕಾಲೇಜು ವಿಭಾಗದ ವಿದ್ಯಾರ್ಥಿ ಸಂಘ ಉದ್ಘಾಟನೆ, ಭಿತ್ತಿಪತ್ರಿಕೆ ಅನಾವರಣ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

0

ಕೆಯ್ಯೂರು : ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇದರ ಪದವಿಪೂರ್ವ ಕಾಲೇಜು ವಿಭಾಗದ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಕಾಲೇಜು ಸಭಾಂಗಣದಲ್ಲಿ ಜರಗಿತು.

ಸಂಸ್ಥೆಯ ಪ್ರಾಂಶುಪಾಲರಾದ ಹಸೀನಾ ಬಾನು ಎಸ್. ಇ. ಸಭಾಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ನಿವೃತ್ತ ಇಂಗ್ಲಿಷ್ ಉಪನ್ಯಾಸಕಿ ಸುನಂದಾ ವಿ. ಕೆ. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ‘ಸಾಧನಾ’ ಭಿತ್ತಿಪತ್ರಿಕೆಯ ಮೊದಲ ಸಂಚಿಕೆಯನ್ನು ಅನಾವರಣಗೊಳಿಸಿ ಮಾತನಾಡಿದರು. ಕನ್ನಡ ಉಪನ್ಯಾಸಕ ಆನಂದ ಎನ್. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಮಾರ್ಚ್ 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಸಾಧಕ ವಿದ್ಯಾರ್ಥಿಗಳಾದ ಲಿಖಿತಾ ರೈ, ಆಯಿಷತ್ ಫರ್ಜಾನಾ, ಸುಪ್ರೀತಾ, ಫಾತಿಮತ್ ಸಫೀದಾ, ಪವನ್ ಕುಮಾರ್ ರೈ, ಲಿಖಿತಾ ಪಿ., ಸೌಭಾಗ್ಯಶ್ರೀ, ಅಪೂರ್ವಾ ಎ., ಫಾತಿಮತ್ ತಸ್ಲೀಮಾ ಹಾಗೂ ಉತ್ತಮ ಅಂಕಗಳನ್ನು ಪಡೆದ ಮರಿಯಮ್ಮತ್ ರುಮೈಸಾ, ಶಿವಲ್ಯಾ ಕೆ., ಅಸ್ಮಾ, ಫಾತಿಮತ್ ತಸ್ಫಿಯಾ ಇವರನ್ನು ಶಾಲು, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಸನ್ಮಾನಿತರ ಪರವಾಗಿ ಫಾತಿಮತ್ ತಸ್ಫಿಯಾ ಅನಿಸಿಕೆ ಹಂಚಿಕೊಂಡರು.

ಕಾಲೇಜಿನ ನಿವೃತ್ತ ಇಂಗ್ಲಿಷ್ ಉಪನ್ಯಾಸಕ, ತುಳು ಸಾಹಿತ್ಯ ಅಕಾಡೆಮಿಯ ಮಾಜಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ‘ವಿದ್ಯಾರ್ಥಿ-ಸಾಧನೆ’ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಕೆಯ್ಯೂರು ಕೆಪಿಎಸ್ ಪ್ರಭಾರ ಪ್ರಾಚಾರ್ಯರಾಗಿಯೂ ಕರ್ತವ್ಯ ನಿರ್ವಹಿಸಿದ್ದ ಸುನಂದಾ ವಿ. ಕೆ. ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಸಂಸ್ಥೆಯ ಉಪ ಪ್ರಾಂಶುಪಾಲ ವಿನೋದ್ ಕುಮಾರ್ ಕೆ. ಎಸ್., ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಗುರು ಬಾಬು ಎಂ., ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಮ್ಮದ್ ಮಿಕ್ದಾದ್ ಕೆ. ಇ., ಕಾರ್ಯದರ್ಶಿ ಆಯಿಷತ್ ಅಫ್ಸೀನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಆಶಾಕುಮಾರಿ, ದಿವ್ಯಾ, ನಿರೀಕ್ಷಾ ಎ. ಕೆ., ಗಗನಾ ಪಿ., ಜೀವಿತಾ ಕೆ. ಪ್ರಾರ್ಥಿಸಿದರು. ಇಂಗ್ಲಿಷ್ ಉಪನ್ಯಾಸಕ ಬಾಲಕೃಷ್ಣ ಬೇರಿಕೆ ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಇಸ್ಮಾಯಿಲ್ ಪಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇತಿಹಾಸ ಉಪನ್ಯಾಸಕಿ ಉಮಾಶಂಕರಿ ಎಸ್. ಕೆ., ಅರ್ಥಶಾಸ್ತ್ರ ಉಪನ್ಯಾಸಕಿ ಗುಣಶೀಲ ಕೆ. ಎನ್. ಕಾರ್ಯಕ್ರಮ ನಿರೂಪಿಸಿದರು. ಜೀವಶಾಸ್ತ್ರ ಉಪನ್ಯಾಸಕಿ ಶ್ವೇತಾ ನೆಟ್ಟಾರು ವಂದಿಸಿದರು.

LEAVE A REPLY

Please enter your comment!
Please enter your name here