ನೆಲ್ಯಾಡಿ: ನಿವೃತ್ತ ಅಂಚೆ ಪಾಲಕ, ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಹೊಸಮಜಲು ನಿವಾಸಿ ಬಾಲಕೃಷ್ಣ(70ವ.)ರವರು ಅನಾರೋಗ್ಯದಿಂದ ಜು.19ರಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಾಲಕೃಷ್ಣ ಅವರಿಗೆ ಕೆಲ ದಿನಗಳ ಹಿಂದೆ ಅನಾರೋಗ್ಯ ಕಾಣಿಸಿಕೊಂಡಿದ್ದು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡು ಜು.18ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆಯಲ್ಲಿದ್ದವರು ಜು.19ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಬಾಲಕೃಷ್ಣ ಅವರು ಕೊಕ್ಕಡ ಅಂಚೆ ಕಚೇರಿಯಲ್ಲಿ ಅಂಚೆ ಪಾಲಕರಾಗಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ಮೃತರು ಪತ್ನಿ ರತ್ನಾವತಿ, ಪುತ್ರರಾದ ಸಂತೋಷ್, ಪ್ರವೀಣ್, ಕಿರಣ್ ಹಾಗೂ ಓರ್ವ ಪುತ್ರಿ, ಮೊಮ್ಮಕ್ಕಳನ್ನು ಅಗಲಿದ್ದಾರೆ.