ಕಾಣಿಯೂರು: ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಷಾಢ ಮಾಸದ ಪೌಷ್ಠಿಕ ಆಹಾರ ಕಾರ್ಯಕ್ರಮವು ಜು.19ರಂದು ನಡೆಯಿತು.
ಆಷಾಡ ಮಾಸದಲ್ಲಿ ಕೆಲವು ಆಹಾರ ಕ್ರಮಗಳನ್ನು ಅನುಸರಿಸುವ ನಿಟ್ಟಿನಲ್ಲಿ ಪೌಷ್ಠಿಕ ಆಹಾರ ಕಾರ್ಯಕ್ರಮ ನಡೆಸಲಾಯಿತು. ಆಷಾಢ ಮಾಸದಲ್ಲಿ ತಯಾರಿಸುವ ಮತ್ತು ಆರೋಗ್ಯಕ್ಕೆ ಪೂರಕವಾಗಿರುವಂತಹ ವಿವಿಧ ಆಹಾರ ಪದಾರ್ಥಗಳನ್ನು ಮಕ್ಕಳೆ ಮನೆಯಲ್ಲಿ ತಯಾರಿಸಿ ತಂದಿದ್ದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಶಶಿಕಲಾ, ಶಿಕ್ಷಕರಾದ ಜನಾರ್ದನ ಹೇಮಳ, ಗೀತಾ ಕುಮಾರಿ, ಶೋಭಿತಾ, ಸುರೇಖಾ, ಶೃತಿ, ದಿವ್ಯಾ, ಜಯಲತಾ, ಸುಶ್ಮಿತಾ ಹಾಗೂ ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
