ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ನ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ದ.ಕ.ಆರನೇ ನ್ಯಾಯಾಲಯ ತೀರ್ಪಿಗೆ ದಿನ ನಿಗದಿಪಡಿಸಿದೆ.
ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಜು. 25ರಂದು ತೀರ್ಪು ನೀಡುವುದಾಗಿ ಪ್ರಕಟಿಸಿದ್ದಾರೆ. 6ನೇ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಆರೋಪಿ ಪರ ಹಾಗೂ ಸರಕಾರದ ಪರ ವಕೀಲರು ವಾದ ಮಂಡಿಸಿದರು. ಆರೋಪಿಯು ಈಗಾಗಲೇ ಬಂಧನದಲ್ಲಿದ್ದಾನೆ.