ಪುತ್ತೂರು: ಮಂಗಳೂರಿನ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು, ಇದು ಪುತ್ತೂರು ಮೂಲದ ವ್ಯಕ್ತಿಯದ್ದು ಎನ್ನಲಾಗುತ್ತಿದೆ.
ಮೃತದೇಹದ ಜೊತೆ ಪತ್ತೆಯಾದ ಆಧಾರ್ ಕಾರ್ಡ್ ನಿಂದ ಪುತ್ತೂರು ಶಾಜು (52) ಎಂದು ಗುರುತಿಸಲಾಗಿದೆ. ಈತ ಕೆಲ ಸಮಯದಿಂದ ಮಂಗಳೂರಿನ ಬಾರೊಂದರಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ರಾತ್ರಿ ಊಟ ಮಾಡಿ ಮಲಗಿದ್ದಲ್ಲಿಯೇ ಮಲ, ಮೂತ್ರ ವಿಸರ್ಜಿಸಿದ್ದ. ಬೆಳಿಗ್ಗೆ ಎದ್ದು ಬೆಳಗಿನ ಉಪಾಹಾರ ಸೇವಿಸಿ ಬಸ್ ನಿಲ್ದಾಣದಲ್ಲಿ ಕುಳಿತವರು ಅಲ್ಲೇ ಮೃತಪಟ್ಟಿದ್ದರು. ಇವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇವರು ಎದ್ದು ಬರುವುದು, ಉಪಹಾರ ಸೇವಿಸುತ್ತಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.
ಸದ್ಯ ವಾರಿಸುದಾರರ ಮಾಹಿತಿ ಪತ್ತೆಯಾಗದ ಹಿನ್ನಲೆಯಲ್ಲಿ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.