ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಗರ ಘಟಕದಿಂದ ಅ.3ರಂದು ಕಾರ್ಜಾಲು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರ್ದ ಕೆಸರ್ದ ಗೊಬ್ಬು’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯು ಜು.21ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಂಡಿತು.
ದೇವಸ್ಥಾನದಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯ ವಿನಯ ಸುವರ್ಣ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಶಶಾಂಕ ಕೊಟೇಚಾ, ಪುತ್ತಿಲ ಪರಿವಾರದ ಅಧ್ಯಕ್ಷ ಮಹೇಂದ್ರ ವರ್ಮ, ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ನಗರ ಮಂಡಲದ ಕಾರ್ಯದರ್ಶಿ ಅನಿಲ್ ತೆಂಕಿಲ, ರಾಜು ಶೆಟ್ಟಿ, ರಾಜೇಶ್ ಬೊಳ್ವಾರು, ಪ್ರವೀಣ್ ಶೆಟ್ಟಿ ತಿಂಗಳಾಡಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.