ನೆಲ್ಯಾಡಿ: ಕಾರು ಹಾಗೂ ಟ್ರೈಲರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಜು.21ರಂದು ನಡೆದಿದೆ. ಘಟನೆಯಲ್ಲಿ ಕಾರು ನಜ್ಜು ಗುಜ್ಜಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಕಾರು ಹಾಗೂ ಮಂಗಳೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಟ್ರೈಲರ್ ಲಾರಿ ನಡುವೆ ಗುಂಡ್ಯ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು ಕಾರಿನಲ್ಲಿದ್ದ ಉಡುಪಿ ಮೂಲದ ರಾಜೇಶ್ ರಾವ್, ಪುರುಷೋತ್ತಮ, ಪೂಜಾ ರಾವ್, ಸಂಜನಾ ರಾವ್ ಮತ್ತು ಭವಿಷ್ ರಾವ್ ಎಂಬವರು ಅಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕನನ್ನು ಬಾಗಲಕೋಟೆ ಮೂಲದ ಹನುಮಂತ ಎಂದು ಗುರುತಿಸಲಾಗಿದೆ. ಘಟನೆ ಸುದ್ದಿ ತಿಳಿಯುತ್ತಿದ್ದಂತೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.