ಶ್ರೀರಾಮಕುಂಜೇಶ್ವರ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಂಘದ ಮತ್ತು ಎನ್.ಎಸ್.ಎಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

0

ಪುತ್ತೂರು: ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘದ ಮತ್ತು ಎನ್.ಎಸ್.ಎಸ್ ಘಟಕದ ಚಟುವಟಿಕೆಗಳ ಉದ್ಘಾಟನೆಯು ನೆರವೇರಿತು.


ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆಯನ್ನು ನೆರವೇರಿಸಿದ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಕೆ ಮಾತನಾಡಿ,”ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸುತ್ತದೆ.ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವವನ್ನು ವಹಿಸುವ ಕಾರಣದಿಂದ, ಮುಂದೆ ಬರಬಹುದಾದ ಸವಾಲುಗಳನ್ನು ಎದುರಿಸುವ ಗುಣ ವಿದ್ಯಾರ್ಥಿಗಳಲ್ಲಿ ಎಳವೆಯಲ್ಲಿಯೇ ಬೆಳೆಯುತ್ತದೆ. ಹಾಗಾಗಿ ವಿವಿಧ ಜವಾಬ್ದಾರಿಗಳನ್ನು ಹೊತ್ತ ವಿದ್ಯಾರ್ಥಿಗಳಾದ ತಾವೆಲ್ಲರೂ ಉತ್ತಮವಾಗಿ ಕಾರ್ಯನಿರ್ವಹಿಸುವಂತಾಗಲಿ” ಎಂದರು.

ಪ್ರಧಾನ ಉಪನ್ಯಾಸವನ್ನು ನೀಡಿದ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ದಾಮೋದರ್ ಎನ್ ಮಾತನಾಡಿ,”ಪ್ರಜಾಪ್ರಭುತ್ವ ಭಾರತದಲ್ಲಿ ಭವಿಷ್ಯದ ನಾಯಕರನ್ನು ಸೃಷ್ಟಿ ಮಾಡುವಂತಹ ಕೆಲಸವನ್ನು ವಿದ್ಯಾರ್ಥಿ ಸಂಘ ಮಾಡುತ್ತದೆ. ಸಂವಿಧಾನವು ಜನರಿಗೆ ವಿವಿಧ ರೀತಿಯ ಹಕ್ಕುಗಳು ಮತ್ತು ಜವಾಬ್ದಾರಿಯನ್ನ ನೀಡಿರುತ್ತದೆ. ಇದರ ಮಹತ್ವವನ್ನ ಅರಿತುಕೊಂಡು ಪ್ರಜ್ಞಾಪೂರ್ವಕವಾಗಿ ವರ್ತಿಸಿದಾಗ ಪ್ರಜಾಪ್ರಭುತ್ವದ ಮೂಲ ಉದ್ದೇಶದ ಈಡೇರಿಕೆ ಆಗುತ್ತದೆ. ಅದೇ ರೀತಿ ವಿದ್ಯಾರ್ಥಿ ಸಂಘಕ್ಕೆ ಆಯ್ಕೆಯಾದ ವಿವಿಧ ಪದಾಧಿಕಾರಿಗಳು ಬಹಳ ಜವಾಬ್ದಾರಿಯುತವಾಗಿ ತಮ್ಮ ಕಾರ್ಯನಿರ್ವಹಣೆ ಮಾಡಿದಲ್ಲಿ, ಶಿಕ್ಷಣ ಸಂಸ್ಥೆ ತನ್ನ ಮೂಲ ಉದ್ದೇಶವನ್ನು ಈಡೇರಿಸಲು ಸಾಧ್ಯವಾಗುತ್ತದೆ.” ಎಂದು ಹೇಳಿದರು.


ಕಾಲೇಜಿನ ಎನ್ಎಸ್ಎಸ್ ಘಟಕದ ಯೋಜನಾಧಿಕಾರಿ ಕೀರ್ತನ್ ಅವರು ಘಟಕದ ಚಟುವಟಿಕೆಗಳ ಪರಿಚಯ ಮಾಡಿದರು.ಅರ್ಥಶಾಸ್ತ್ರ ಉಪನ್ಯಾಸಕ ಶಿವಪ್ರಸಾದ್ ಪಿ ಪದಪ್ರಧಾನ ಸಮಾರಂಭ ನೆರವೇರಿಸಿದರು. ಹಿಂದಿ ಉಪನ್ಯಾಸಕ ಲೋಹಿತ್ ಕೆ ಪ್ರಮಾಣವಚನ ಬೋಧಿಸಿದರು.ವಿದ್ಯಾರ್ಥಿನಿಯರಾದ ತ್ರಿಷಾ ರೈ ಮತ್ತು ಬಳಗದವರು ಪ್ರಾರ್ಥನೆ ನೆರವೇರಿಸಿದರು.
ವಿದ್ಯಾರ್ಥಿ ನಾಯಕ ಪ್ರಖ್ಯಾತ್ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕಶ್ವಿ ವಂದಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಶ್ರೇಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here