ಪುತ್ತೂರು: 2024-25ನೇ ಸಾಲಿನಲ್ಲಿ ಮೈಸೂರಿನ ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ನಡೆಸಿದ ಭರತನಾಟ್ಯ ಶಾಸೀಯ ನೃತ್ಯದ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಮೂವರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ನೃತ್ಯೋಪಾಸನಾ ಅಕಾಡೆಮಿಯ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ಇವರ ಶಿಷ್ಯರು.

ತೇಜಸ್ವಿರಾಜ್ ಇವರು ಶೇ.81.1 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಳೆದ 10 ವರ್ಷಗಳಿಂದ ಭರತನಾಟ್ಯ ಶಾಸೀಯ ನೃತ್ಯ ಅಭ್ಯಾಸ ಮಾಡುತ್ತಿರುವ ಇವರು, 2018ರಲ್ಲಿ ಜೂನಿಯರ್, 2021ರಲ್ಲಿ ಸೀನಿಯರ್ ಪರೀಕ್ಷೆಯಲ್ಲಿ ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು. ಪ್ರಸ್ತುತ ಸಿಎ ಆರ್ಟಿಕಲ್ಶಿಪನ್ನು ಪುತ್ತೂರಿನ ಅರವಿಂದಕೃಷ್ಣ ಅವರಲ್ಲಿ ಮಾಡುತ್ತಿರುವ ಇವರು ಕಡಬ ಕೋಲಂತಾಡಿ ಶ್ರೀಮತಿ ಲಕ್ಷ್ಮೀ ಮತ್ತು ದಿ| ಶಾಂತರಾಮ ಗೌಡರ ಪುತ್ರ.
ಎ.ವಿದ್ಯಾಲಕ್ಷ್ಮಿ ಇವರು ಶೇ.76.6 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಳೆದ 12 ವರ್ಷಗಳಿಂದ ಭರತನಾಟ್ಯ ಶಾಸ್ತ್ರೀಯ ನೃತ್ಯ ಅಭ್ಯಾಸ ಮಾಡುತ್ತಿರುವ ಇವರು, 2017ರಲ್ಲಿ ಜೂನಿಯರ್, 2020ರಲ್ಲಿ ಸೀನಿಯರ್ ಪರೀಕ್ಷೆಯಲ್ಲಿ ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು. ಪ್ರಸ್ತುತ ವಿವೇಕಾನಂದ ಪದವಿ ಕಾಲೇಜು ಪುತ್ತೂರಿನಲ್ಲಿ ದ್ವಿತೀಯ ಬಿ.ಎಸ್ಸಿ ವ್ಯಾಸಂಗ ಮಾಡುತ್ತಿರುವ ಇವರು ಕಡಬ ತಾಲೂಕಿನ ನಾಕೂರು ನಿವಾಸಿ ರವಿಶಂಕರ ಭಟ್ ಮತ್ತು ಕೃಷ್ಣವೇಣಿ ದಂಪತಿ ಪುತ್ರಿ.
ಭಾರತಿ. ಎಂ. ಇವರು ಶೇ.76.5 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಡಬ ತಾಲೂಕಿನ ಕೋಡಿಂಬಾಳ ನಿವಾಸಿ ಮಾಧವ ಭಟ್ ಮತ್ತು ಗಾಯತ್ರಿ ದಂಪತಿ ಪುತ್ರಿಯಾದ ಈಕೆ ಬಿ.ಕಾಂ ಪದವೀಧರೆ. ಕಳೆದ 10 ವರ್ಷಗಳಿಂದ ಭರತನಾಟ್ಯ ಶಾಸೀಯ ನೃತ್ಯ ಅಭ್ಯಾಸ ಮಾಡುತ್ತಿರುವ ಇವರು , 2018ರಲ್ಲಿ ಜೂನಿಯರ್, 2021ರಲ್ಲಿ ಸೀನಿಯರ್ ಪರೀಕ್ಷೆಯಲ್ಲಿ ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು.
ಫಲ್ಗುಣಿ ವಿ. ಇವರು ಶೇ.66.6 ಅಂಕಗಳೊಂದಿಗೆ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಳೆದ 11 ವರ್ಷಗಳಿಂದ ಭರತನಾಟ್ಯ ಶಾಸ್ತ್ರೀಯ ನೃತ್ಯ ಅಭ್ಯಾಸ ಮಾಡುತ್ತಿರುವ ಇವರು, 2017ರಲ್ಲಿ ಜೂನಿಯರ್, 2020ರಲ್ಲಿ ಸೀನಿಯರ್ ಪರೀಕ್ಷೆಯಲ್ಲಿ ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು. ಪ್ರಸ್ತುತ ವಿವೇಕಾನಂದ ಪದವಿ ಕಾಲೇಜು ಪುತ್ತೂರಿನಲ್ಲಿ ಅಂತಿಮ ಬಿ.ಕಾಂ. ವ್ಯಾಸಂಗ ಮಾಡುತ್ತಿರುವ ಇವರು ಬಂಟ್ವಾಳ ತಾಲೂಕಿನ ವಿಟ್ಲ ನಿವಾಸಿ ಉದಯೇಶ್ ಕೆದಿಲಾಯ ಮತ್ತು ಲತಾ ದಂಪತಿ ಪುತ್ರಿ.