ವಿಟ್ಲ: ವಿಟ್ಲ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಕೇಪು ವಲಯ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಹಲವಾರು ವರ್ಷಗಳ ಕಾಲ ಕೇಪು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಹಾಗೂ ಕೇಪು ಮಂಡಲ ಪಂಚಾಯತ್ ಮಾಜಿ ಸದಸ್ಯರಾದ ದೇವದಾಸ ರೈ ಕೇಪುಗುತ್ತು ರವರನ್ನು ಸನ್ಮಾನಿಸಲಾಯಿತು.
ಮಾಜಿ ಸಚಿವರಾದ ಬಿ. ರಮಾನಾಥ್ ರೈ ರವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ರವರು ವಹಿಸಿದ್ದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮುಹಮ್ಮದ್,ದ ಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರವೀಣ್ ಚಂದ್ರ ಆಳ್ವ, ಮುರಳಿದರ್ ರೈ ಮಠಂದಬೆಟ್ಟು,
ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ದ ಕ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಮಾನಾಥ್ ವಿಟ್ಲ ,ಮೆಸ್ಕಾಂ ವಿಟ್ಲ ಉಪವಿಭಾಗ ಸಲಹಾ ಸಮಿತಿ ಸದಸ್ಯ ಅಬ್ದುಲ್ ಕರೀಂ ಕುದ್ದುಪದವು.ಮುಖಂಡರಾದ ಸುಧಾಕರ ಪೂಜಾರಿ,ಶ್ರೀಧರ್ ಶೆಟ್ಟಿ ಪುಣಚ ಸೇರಿದಂತೆ ಕೇಪು ವಲಯದ ಬೂತ್ ಅಧ್ಯಕ್ಷರುಗಳು ಉಪಸ್ಥಿತರಿದ್ದರು.
ಮಾಜಿ ವಲಯ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಬೆಗ್ರೋಂಡಿ ಕಾರ್ಯಕ್ರಮ ನಿರೂಪಿಸಿದರು. ಕೇಪು ವಲಯ ಕಾಂಗ್ರೆಸ್ ಅಧ್ಯಕ್ಷ ಕೋಟಿ ಪೂಜಾರಿಯವರು ಸ್ವಾಗತಿಸಿದರು, ಶ್ರೀನಿವಾಸ ಶೆಟ್ಟಿ ಬೆಂಗ್ರೋಡಿ ಸನ್ಮಾನ ಪತ್ರ ವಾಚಿಸಿದರು.