ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ವಿಶ್ವ ಮಾನವ ಕಳ್ಳಸಾಗಣೆ ವಿರೋಧಿ ದಿನ ಆಚರಣೆ

0

ಪುತ್ತೂರು : ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ (ಸ್ವಾಯತ್ತ) ಆಂಟಿ ಹ್ಯೂಮನ್ ಟ್ರಾಫಿಕಿಂಗ್ ಕ್ಲಬ್ ಮತ್ತು ಆಂಟಿ ವಿಮೆನ್ ಹೆರಸ್ ಮೆಂಟ್ ಸೆಲ್ ವತಿಯಿಂದ ವಿಶ್ವ ಮಾನವ ಕಳ್ಳಸಾಗಣೆ ವಿರೋಧಿ ದಿನವನ್ನು ಆಚರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ರೆ. ಡಾ| ಆಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ಇಂದಿನ ಜಗತ್ತಿನಲ್ಲಿ ಪರಿಚಿತ ಸ್ಥಳಗಳಲ್ಲಿಯೂ ಕಾಣದ ಅಪಾಯಗಳು ಅಡಗಿರುವಾಗ, ನಮ್ಮ ವಿದ್ಯಾರ್ಥಿಗಳು ಹೆಚ್ಚು ಜಾಗರೂಕರಾಗಿರಬೇಕು ಎಂದು ಹೇಳಿ ವಿದ್ಯಾರ್ಥಿಗಳಿಗೆ ಮಾನವ ಕಳ್ಳಸಾಗಣೆ ವಿರೋಧಿ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ಮಾನವ ಕಳ್ಳಸಾಗಣೆ ವಿರೋಧಿ ಕ್ಲಬ್‌ನ ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಆಂಟಿ ಹ್ಯೂಮನ್ ಟ್ರಾಫಿಕಿಂಗ್ ಕ್ಲಬ್ ಸದಸ್ಯ ಕಾರ್ಯದರ್ಶಿ ಮತ್ತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಭಾರತಿ ಎಸ್. ರೈ, ಕಳ್ಳಸಾಗಣೆಯ ಮಾನಸಿಕ, ಸಾಮಾಜಿಕ ಮತ್ತು ಕಾನೂನು ಆಯಾಮಗಳ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ ಐಕ್ಯೂಎಸಿ ಸಂಯೋಜಕರಾದ ಡಾ. ಎಡ್ವಿನ್ ಎಸ್. ಡಿಸೋಜಾ ಮತ್ತು ಆಂಟಿ ವಿಮೆನ್ ಹೆರಸ್‌ಮೆಂಟ್ ಸೆಲ್ ಸಂಚಾಲಕಿ ನೋವೆಲಿನ್ ಎನ್. ಡಿಸೋಜಾ ಉಪಸ್ಥಿತರಿದ್ದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಶೇಖರ್ ಕೆ. ಮತ್ತು ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ವಿನಿಲ್ ರೋಹನ್ ಡಿಸೋಜಾ ಉಪಸ್ಥಿತರಿದ್ದರು. ಮಾನಸ ಮತ್ತು ಅಪರ್ಣ ಪ್ರಾರ್ಥಿಸಿದರು. ಇಂಗ್ಲೀಷ್ ವಿಭಾಗದ ಉಪನ್ಯಾಸಕಿ ಸುಷ್ಮಾ ಕ್ರಾಸ್ತಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here