ತಲೆಮರೆಸಿಕೊಂಡಿದ್ದ ಆರೋಪಿ ವಶಕ್ಕೆ : ಜಾಮೀನು ಪಡೆದ ಬಳಿಕ ನ್ಯಾಯಾಲಯದ ಆದೇಶ ಉಲ್ಲಂಘನೆ ; ಮತ್ತೊಂದು ಪ್ರಕರಣ ದಾಖಲು

0

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 35/2001 ಕಲಂ: 379 ಜೊತೆಗೆ 34 ಭಾ.ದಂ.ಸಂನೇ ಪ್ರಕರಣದಲ್ಲಿ ಆರೋಪಿತನಾಗಿ 2018ರಲ್ಲಿ ಜಾಮೀನು ಪಡೆದ ನಂತರ, ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಸೋಮವಾರಪೇಟೆಯ ಮಹಮ್ಮದ್ ಹನೀಫ್ (55) ಎಂಬಾತನನ್ನು ಕೊಡಗು ಜಿಲ್ಲೆಯ ಕುಶಾಲನಗರ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದುಕೊಳ್ಳಲಾಗಿದೆ.

ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ: 269 ಬಿ.ಎನ್ ಎಸ್ ರಂತೆ ಪ್ರಕರಣ ದಾಖಲು ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

LEAVE A REPLY

Please enter your comment!
Please enter your name here