





ಉಪ್ಪಿನಂಗಡಿ: ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದ ವಾಮನ ಸಪಲ್ಯ (71) ಅಲ್ಪ ಕಾಲದ ಅನಾರೋಗ್ಯದಿಂದ ಆ.1ರಂದು ಹಿರೇಬಂಡಾಡಿ ಗ್ರಾಮದ ನೆಕ್ಕರೆ ಎಂಬಲ್ಲಿನ ಸ್ವಗೃಹದಲ್ಲಿ ನಿಧನರಾದರು.


ಉಪ್ಪಿನಂಗಡಿ, ಕೊಂಬಾರು, ನೆಲ್ಯಾಡಿ, ಹಿರೇಬಂಡಾಡಿ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಇವರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.















