ಕಡಬ: ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ ಇದರ ಪ್ರಸಕ್ತ ಶೈಕ್ಷಣಿಕ ವರ್ಷದ ಪೋಷಕರ ಸಭೆಯು ಸಂಸ್ಥೆಯ ಅಧ್ಯಕ್ಷ ರವಿರಾಜ್ ಶೆಟ್ಟಿ ಕಡಬ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಟಿ. ನಾರಾಯಣ ಭಟ್ ರಾಮಕುಂಜ ಪೋಷಕರಿಗೆ ಸಂಸ್ಕಾರ ಬದುಕಿನ ಕುರಿತು ಮಾರ್ಗದರ್ಶನವನ್ನು ನೀಡಿದರು. ಸಭೆಯಲ್ಲಿ ಪೋಷಕರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
ವೇದಿಕೆಯಲ್ಲಿ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಲಿಂಗಪ್ಪ. ಜೆ, ಮುಖ್ಯ ಶಿಕ್ಷಕಿ ಶೈಲಶ್ರೀ ರೈ ಎಸ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಲಕ್ಷ್ಮೀಶ ಗೌಡ ಆರಿಗ ಸ್ವಾಗತಿಸಿ, ಶಿಕ್ಷಕಿ ಜಲಜಾಕ್ಷಿ ಬಿ.ವಿ. ವಂದಿಸಿದರು. ವಿದ್ಯಾರ್ಥಿನಿ ಕು. ಹರಿಪ್ರಿಯಾ ಹರಿದಾಸ್ ಪ್ರಾರ್ಥಿಸಿ ಶಿಕ್ಷಕಿ ಕುಮಾರಿ ದೀಕ್ಷಿತಾ ಕೆ ಕಾರ್ಯಕ್ರಮ ನಿರೂಪಿಸಿದರು.