ಒಳಮೊಗ್ರು ಗ್ರಾ.ಪಂ. ಕಟ್ಟಡಕ್ಕೆ ಅನುದಾನ ಒದಗಿಸಿ ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ

0

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ ಕಛೇರಿಯ ಕಟ್ಟಡದ ಮೇಲಂತ್ತಸ್ಥಿನಲ್ಲಿ ಸಭಾಂಗಣ, ಗ್ರಂಥಾಲಯ ಇತ್ಯಾದಿಗಳಿಗೆ ಅನುಕೂಲವಾಗುವಂತೆ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಡುವಂತೆ ಭಾರತೀಯ ಜನತಾ ಪಾರ್ಟಿ ಒಳಮೊಗ್ರು ಶಕ್ತಿಕೇಂದ್ರದ ವತಿಯಿಂದ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜತ್ರೆ, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ, ದಕ್ಷಿಣ ಕನ್ನಡ ಟೆಲಿಕಾಂ ಸಲಹಾ ಮಂಡಳಿ ಸದಸ್ಯ ನಿತೀಶ್ ಕುಮಾರ್ ಶಾಂತಿವನ, ನೆಟ್ಟಣಿಗೆ ಮುಡ್ನೂರು ಮಹಾಶಕ್ತಿಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಒಳಮೊಗ್ರು ಗ್ರಾಮ ಪಂಚಾಯತ್ ಸದಸ್ಯರೂ, ಶಕ್ತಿಕೇಂದ್ರದ ಪ್ರಮುಖ್ ಮಹೇಶ್ ಕೇರಿ, ಗ್ರಾಮ ಪಂಚಾಯತ್ ಸದಸ್ಯೆ ರೇಖಾ ಯತೀಶ್, ಸಚಿನ್ ರೈ ಪಾಪೆಮಜಲು ಉಪಸ್ಥಿತರಿದ್ದರು.

ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ಸಂಸದರು ಆದಷ್ಟು ಶೀಘ್ರದಲ್ಲಿ ತಮ್ಮ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here