ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನ ಕಬಡ್ಡಿ ಮ್ಯಾಟ್ ಉದ್ಘಾಟನಾ ಕಾರ್ಯಕ್ರಮ ಜರಗಿತು.

ದಾನಿಗಳ ನೆರವಿನಿಂದ ಸುಮಾರು 2.50 ಲಕ್ಷ ರೂ.ಮೌಲ್ಯದ ಕಬಡ್ಡಿ ಮ್ಯಾಟ್ನ್ನು ಕಬಡ್ಡಿ ತರಬೇತುದಾರ ಮಾಧವ ಬಿ.ಕೆ.ಅವರು ತೆಂಗಿನಕಾಯಿ ಹೊಡೆಯುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್., ಕೋಶಾಧಿಕಾರಿ ಕೆ.ಸೇಸಪ್ಪ ರೈ, ಪುತ್ತೂರು ಎಸ್ಆರ್ಕೆ ಲ್ಯಾಡರ್ಸ್ನ ಮಾಲಕ ಕೇಶವ ಅಮೈ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಉಮೇಶ್, ಚಂದ್ರಹಾಸ ಶೆಟ್ಟಿ, ಶಿವರಾಮ ಏನೆಕಲ್ಲು, ಕೃಷ್ಣ ಪ್ರಸಾದ್, ನೋಣಯ್ಯ ಪೂಜಾರಿ, ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.