ಉಪ್ಪಿನಂಗಡಿ: ಇಲ್ಲಿನ 49ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಗುರು ಸುಧೀಂದ್ರ ಕಲಾ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭ ಸಮಿತಿಯ ಅಧ್ಯಕ್ಷರಾದ ಸುಧಾಕರ ಶೆಟ್ಟಿ ಗಾಂಧಿಪಾರ್ಕ್, ಕಾರ್ಯದರ್ಶಿ ಜಯಪ್ರಕಾಶ್ ಶೆಟ್ಟಿ, ಪದಾಧಿಕಾರಿಗಳಾದ ಯತೀಶ್ ಶೆಟ್ಟಿ, ಚಂದ್ರಹಾಸ ಹೆಗ್ಡೆ, ಶರತ್ ಕೋಟೆ, ಕೀರ್ತನ್ ಶೆಟ್ಟಿ, ಕಂಗ್ವೆ ವಿಶ್ವನಾಥ ಶೆಟ್ಟಿ, ಎನ್. ಗೋಪಾಲ ಹೆಗ್ಡೆ, ರಾಮಚಂದ್ರ ಮಣಿಯಾಣಿ, ವೇಣು, ವೈ. ವೆಂಕಟೇಶ ಶೆಣೈ, ಕೃಷ್ಣಪ್ರಸಾದ್ ದೇವಾಡಿಗ, ಚಂದ್ರಶೇಖರ ಆಚಾರ್ಯ, ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು, ಸುಜಯ್ ಶೆಟ್ಟಿ, ಪುರುಷೋತ್ತಮ ಮುಂಗ್ಲಿಮನೆ, ಚಂದ್ರಶೇಖರ ಮಡಿವಾಳ, ರಾಧಾಕೃಷ್ಣ ಭಟ್ ಬೊಳ್ಳಾವು ಮತ್ತಿತರರು ಉಪಸ್ಥಿತರಿದ್ದರು.