ಸವಣೂರಿನಲ್ಲಿ ಕೆಸರ್ದ ಕಂಡೊಡು ಕುಸಲ್ದ ‌ಗೊಬ್ಬು

0

ಪುತ್ತೂರು : ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಹಾಗೂ ಅಂಬಾ ಬ್ರದರ್ಸ್ ಸವಣೂರು ಇದರ ಸಂಯೋಗದಲ್ಲಿ ಸವಣೂರು ಬಸದಿ ಬಳಿಯ ನ್ಯಾಯವಾದಿ ನಿರ್ಮಲ್ ಕುಮಾರ್ ಜೈನ್ ಇವರ ಗದ್ದೆಯಲ್ಲಿ ಕೆಸರ್ದ ಕಂಡೊಡು ಕುಸಲ್ದಗೊಬ್ಬು ಕಾರ್ಯಕ್ರಮ ಆ.3 ರಂದು ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಆಡಳಿತ ಅಧಿಕಾರಿ ಅಶ್ವಿನ್ ಎಲ್ ಶೆಟ್ಟಿ ವಹಿಸಿದ್ದರು, ನ್ಯಾಯವಾದಿಗಳು ಗದ್ದೆಯ ಮಾಲಕರೂ ಆದ ನಿರ್ಮಲ್ ಕುಮಾರ್ ಜೈನ್ ಉದ್ಘಾಟಿಸಿದರು. ರಾಜ್ಯ ಯುವಜನ ಒಕ್ಕೂಟದ ಕಾರ್ಯದರ್ಶಿ ಸುರೇಶ್ ಸುಡಿಮುಳ್ಳು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡಂಜಿ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ರಾಜಲಕ್ಷ್ಮಿ ಎಸ್ ರೈ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ, ಸವಣೂರು ಯುವಕ ಮಂಡಲದ ಅಧ್ಯಕ್ಷ ಚೇತನ್ ಕೋಡಿಬೈಲು, ಸವಣೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ನಡುಬೈಲು, ಕಾರ್ಯದರ್ಶಿ ಸತೀಶ್ ಬಲ್ಯಾಯ ಉಪಸ್ಥಿತರಿದ್ದರು.

ಪ್ರಾಥಮಿಕ, ಪ್ರೌಢ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಶಿಕ್ಷಕರು, ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಹಾಗೂ ಅಂಬಾ ಬ್ರದರ್ಸ್ ತಂಡದ ಬಾಲಚಂದ್ರ ರೈ ಕೆರೆಕ್ಕೋಡಿ ಮತ್ತು ಸದಸ್ಯರು ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here