





ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಪುತ್ತೂರು ನಗರ ಠಾಣೆ, ಸಂಚಾರಿ ಠಾಣೆ, ಮಹಿಳಾ ಠಾಣೆ ಇವರ ಸಹಯೋಗದಲ್ಲಿ ಲಿಟ್ಲ್ ಫ್ಲವರ್ ಶಾಲೆ ದರ್ಬೆ ಇಲ್ಲಿ ನಡೆದ 7ರಿಂದ 10ನೇ ತರಗತಿಯ ಆಯ್ದ ಶಾಲಾ ವಿದ್ಯಾರ್ಥಿಗಳಿಗಾಗಿ ಇಂಡಿಪೆಂಡೆನ್ಸ್ ಡೇ ಕ್ವಿಝ್ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಧನುಷ್ ಡಿ.ಜಿ ಮತ್ತು ಚರಿತ್ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.












