ಕಾಣಿಯೂರು: ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕಾಣಿಯೂರು ಘಟಕ ಸಮಿತಿ ವತಿಯಿಂದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಹಾಗೂ ಗ್ರಾಮೋತ್ಸವದ ಸಲುವಾಗಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದ ಎದುರಿನಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಕಾಣಿಯೂರು ಶ್ರೀ ಮಠದ ವ್ಯವಸ್ಥಾಪಕರಾದ ಶ್ರೀನಿಧಿ ಆಚಾರ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಬಳಿಕ ದೇವಸ್ಥಾನದ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.