ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವ್ಯವಹಾರ ನಿರ್ವಹಣಾ ವಿಭಾಗದಿಂದ “ಭವಿಷ್ಯಮುಖಿ ನಾಯಕತ್ವ” ಎಂಬ ವಿಷಯದಲ್ಲಿ ಕಾರ್ಯಾಗಾರ ಹಾಗೂ ವ್ಯವಹಾರ ನಿರ್ವಹಣಾ ಸಂಘಟನೆಯ ಉದ್ಘಾಟನೆ ನಡೆಸಲಾಯಿತು.
ಮುಖ್ಯ ಅತಿಥಿಯಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ, ಬಹರೈನ್ ಕಿಂಗ್ಡಮ್ ವಿಶ್ವವಿದ್ಯಾನಿಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ, ಎಂ.ಬಿ.ಎ. ಕಾರ್ಯಕ್ರಮದ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತ್ತಿರುವ ಡಾ. ಹಬೀಬ್ ಯು. ಆರ್. ರಹ್ಮಾನ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಶುಭಹಾರೈಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಆಂಟನಿ ಪ್ರಕಾಶ್ ಮೊಂತೆರೊ ಅಧ್ಯಕ್ಷತೆ ವಹಿಸಿ ಮಾತನಾಡಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವ ಅಗತ್ಯತೆಯನ್ನು ಹೇಳಿ ಈ ರೀತಿಯ ಸಂಘಟನೆಗಳು ಶೈಕ್ಷಣಿಕ ಉತ್ತೇಜನ, ಸಾಫ್ಟ್ಸ್ಕಿಲ್ಸ್ ಅಭಿವೃದ್ಧಿ ಮತ್ತು ಸಕಾರಾತ್ಮಕ ಅಧ್ಯಯನವನ್ನು ಉತ್ತೇಜಿಸುತ್ತವೆ ಎಂದು ತಿಳಿಸಿದರು. ವಿದ್ಯಾರ್ಥಿನಿ ಪ್ರಿಯಾ ಸಂದರ್ಭೋಚಿತವಾಗಿ ಮಾತನಾಡಿದರು. ನಿರ್ವಹಣಾ ಸಂಘಟನೆಯ ಸಂಚಾಲಕಿ ಪುಷ್ಪಾ ಎನ್. ಹಾಗೂ ಸಂಘಟನೆಯ ಕಾರ್ಯದರ್ಶಿ ವಿದ್ಯಾರ್ಥಿ ಲಿಖಿತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ಪ್ರಶಾಂತ್ ರೈ, ಅಭಿಷೇಕ್ ಸುವರ್ಣ, ಸಿಂಚನಾ ಮತ್ತು ಶ್ರುತಿ ರೈ ಸಹಕರಿಸಿದರು. ವಿದ್ಯಾರ್ಥಿನಿ ಹಾಗೂ ನಿರ್ವಹಣಾ ಸಂಘಟನೆಯ ಅಧ್ಯಕ್ಷೆ ದೇವಚಮ್ಮ ವಂದಿಸಿದರು. ವಿದ್ಯಾರ್ಥಿ ರಕ್ಷಿತ್ ಕಾರ್ಯಕ್ರಮ ನಿರೂಪಿಸಿದರು.