ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ – ಶ್ರೀ ಒಡಿಯೂರು ಗ್ರಾಮೋತ್ಸವ 2025ರ ಪ್ರಯುಕ್ತ ಶ್ರೀ ಗುರುದೇವಾನಂದ ಸ್ವಾಮೀಜಿಯವರ ದಿವ್ಯಮಾರ್ಗದರ್ಶನದಲ್ಲಿ ಆ.6ರಂದು ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಅಂತರ್ ಕಾಲೇಜು ವಿದ್ಯಾರ್ಥಿಗಳ ಕಿರು ನಾಟಕ ಸ್ಪರ್ಧೆ ನಡೆಯಲಿದೆ. ಈ ಸ್ಪರ್ದೇಯಲ್ಲಿ ಹಲವಾರು ಕಾಲೇಜುಗಳ ತಂಡ ಭಾಗವಹಿಸಲಿವೆ. ಬೆಳಿಗ್ಗೆ ಗಂಟೆ 9.30ಕ್ಕೆ ಸ್ಪರ್ಧೆಯು ಒಡಿಯೂರು ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡು ಸಂಜೆಯ ತನಕ ನಡೆಯಲಿದೆ.