ಪುತ್ತೂರು: ಮೇನಾಲ ಮಧುರಾ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ಪೋಷಕ-ಶಿಕ್ಷಕರ ಸಭೆ ಆ.2ರಂದು ನಡೆಯಿತು. ಮುಖ್ಯೋಪಾಧ್ಯಾಯಿನಿ ಪುಷ್ಪಲತಾ ಹಾಗೂ ಶಾಲಾ ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯಗುರು ಪುಷ್ಪಲತಾ ಅವರು ಶಾಲೆಯ ಸಾಧನೆ ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಪೋಷಕರಿಗೆ ಪ್ರಶ್ನೋತ್ತರ ಸಮಯವನ್ನು ಒದಗಿಸಲಾಗಿದ್ದು, ಅದರಲ್ಲಿ ಅವರು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಹಂಚಿಕೊಂಡರು. ಬಳಿಕ ಹೊಸ ಪಿಟಿಎ ಸಮಿತಿಯನ್ನು ರಚಿಸಿ, ಆಯ್ಕೆಯಾದ ಎಲ್ಲಾ ಸದಸ್ಯರಿಗೆ ಗುಲಾಬಿ ಹೂ ನೀಡಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮ್ಯಾನೇಜರ್ ಖದೀಜತ್ ರೈಹಾನಾ ಮತ್ತು ಅಡ್ಮಿನ್ ಆಫೀಸರ್ ಅಬ್ದುಲ್ ನಾಸಿರ್, ಶಾಲಾ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಲಿಕ್ಷಿತಾ ಸ್ವಾಗತಿಸಿದರು. ಶಿಕ್ಷಕಿ ಮಹೇಶ್ವರಿ ವಂದಿಸಿದರು. ಶಿಕ್ಷಕಿ ಕದೀಜಾ ಕಾರ್ಯಕ್ರಮ ನಿರೂಪಿಸಿದರು.