
ಪುತ್ತೂರು: ವಿದ್ಯಾಭಾರತಿ ಕರ್ನಾಟಕ ದಕ್ಷಿಣಕನ್ನಡ ಜಿಲ್ಲೆ ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ ಪುಣಚದ ಆಯೋಜನೆಯಲ್ಲಿ ನಡೆದ ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರೌಢ ವಿಭಾಗದ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಪ್ರಶಸ್ತಿಯೊಂದಿಗೆ ರಾಜ್ಯಮಟ್ಟಕ್ಕೆಆಯ್ಕೆಯಾಗಿದೆ. ಪ್ರಾರ್ಥಮಿಕ ವಿಭಾಗದ ಬಾಲಕರತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
