ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಪುತ್ತೂರು ಇದರ ಆಶ್ರಯದಲ್ಲಿ ಎರಡನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.8ರಂದು ಮುಕ್ರಂಪಾಡಿ ಸುಭದ್ರ ಕಲಾ ಮಂದಿರದಲ್ಲಿ ನಡೆಯಲಿದೆ.
ಬೆಳಿಗ್ಗೆ 7ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಜಯಶ್ರೀ ಆಚಾರ್ಯ ಕೆಮ್ಮಿಂಜೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. 10 ಗಂಟೆಯಿಂದ ವರಮಹಾಲಕ್ಷ್ಮೀ ಪೂಜೆ ಪ್ರಾರಂಭಗೊಳ್ಳಲಿದೆ. ಮಧ್ಯಾಹ್ನ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ಪ್ರೇಮ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ವಿವೇಕಾನಂದ ಸ್ನಾತಕೋತ್ತರ ಮಹಾವಿದ್ಯಾಲದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ವಿಜಯ ಸರಸ್ವತಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ವರಮಹಾಲಕ್ಷ್ಮೀ ಪೂಜಾ ಸಮಿತಿ ಗೌರವಾಧ್ಯಕ್ಷೆ ರಜತಾ ಗಿರೀಶ್ ಭಟ್ , ರಾಧಿಕಾ ದಿನೇಶ್ ರೈ ಮಡಪ್ಪಾಡಿ, ಸಂಪ್ಯ ಅಕ್ಷಯ ಕಾಲೇಜಿನ ಆಡಳಿತ ನಿರ್ದೇಶಕಿ ಕಲಾವತಿ ಜಯಂತ ನಡುಬೈಲು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಅಧ್ಯಕ್ಷ ಮಹೇಂದ್ರ ವರ್ಮ ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿ ಕಾರ್ಯದರ್ಶಿ ಅನ್ನಪೂರ್ಣ ಬಲ್ಲಾಲ್ ತಿಳಿಸಿದ್ದಾರೆ.