ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ಕಣ್ಣಿನ ತಪಾಸಣಾ ಶಿಬಿರ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ಭಾರತ ಸರ್ಕಾರದ ಅಂಧತ್ವ ನಿವಾರಣ ಸಂಘದ ಸಹಯೋಗದಿಂದ ಮಕ್ಕಳ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.
ಶಾಲೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಅಧ್ಯಕ್ಷತೆ ವಹಿಸಿದ್ದರು. ಎಸ್‌ಆರ್‌ಕೆ ಲ್ಯಾಡರ‍್ಸ್‌ನ ಮಾಲತಿ ಕೇಶವ ಅವರು ಉದ್ಘಾಟಿಸಿದರು. ನಿವೃತ್ತ ನೇತ್ರಾಧಿಕಾರಿ ಶಾಂತರಾಜ್ ಹಾಗೂ ಅವರ ತಂಡದವರು ಕಣ್ಣಿನ ತಪಾಸಣೆ ನಡೆಸಿ, ಅಗತ್ಯ ಸಲಹೆಗಳನ್ನು ನೀಡಿದರು. ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here