ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನಾಲ್ಕನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ, ಅನ್ನಸಂತರ್ಪಣೆ

0

ಪುತ್ತೂರು: ಶ್ರೀ ರಾಮ ಮಂದಿರ ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕುಂಬ್ರ ವಲಯ, ಸನ್ಯಾಸಿಗುಡ್ಡೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ನಾಲ್ಕನೇ ವರ್ಷದ ಸಾರ್ವಜನಿಕ ಶ್ರೀ ವರ ಮಹಾಲಕ್ಷ್ಮೀ ವೃತ ಪೂಜೆ ಆ.8ರಂದು ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರ ಕೆದಂಬಾಡಿಯಲ್ಲಿ ಜರಗಿತು.

ವೇದಮೂರ್ತಿ ಶ್ರೀ ಕೃಷ್ಣ ಕುಮಾರ ಉಪಾಧ್ಯಾಯ ಪಟ್ಲಮೂಲೆಯವರು ಪೂಜಾ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು. ಆರಂಭದಲ್ಲಿ ಸಪರಿವಾರ ಶ್ರೀ ರಾಮ ದೇವರಲ್ಲಿ ಪ್ರಾರ್ಥನೆ ನಡೆದು ಬಳಿಕ ಪೂಜೆ ಆರಂಭಗೊಂಡಿತು. ಮಧ್ಯಾಹ್ನ ಮಹಾ ಮಂಗಳಾರತಿ ಬಳಿಕ ಪ್ರಸಾದ ವಿತರಣೆ ನಡೆದು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಗ್ರಾಮದ ಭಕ್ತಾಧಿಗಳು ಸೇರಿದಂತೆ ಊರಪರವೂರ ನೂರಾರು ಭಕ್ತಾಧಿಗಳು ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು. ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ, ಶ್ರೀ ರಾಮ ಮಂದಿರದ ಆಡಳಿತ ಸಮಿತಿ ಮತ್ತು ಭಜನಾ ಸಮಿತಿ, ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ ಕುಂಬ್ರ ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಗೂ ಸನ್ಯಾಸಿಗುಡ್ಡೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸರ್ವ ಸದಸ್ಯರುಗಳು, ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here